ರಾಮನಗರ: ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಗೆ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿ ನಡೆಸಿದ ರೋಡ್ ಶೋ ನಲ್ಲಿ ಸುಮಾರು 20 ಸಾವಿರ ಕಾರ್ಯಕರ್ತರು ಭಾಗವಹಿಸಿದ್ದರು
ಚನ್ನಪಟ್ಟಣಕೆ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಬಂದು ನಾಮಪತ್ರ ಸಲ್ಲಿಕೆಗೂ ಮುನ್ನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು. ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ನಿಖಿಲ್‌ಗೆ ಹೆಚ್‌ಡಿಕೆ, ಆರ್.ಅಶೋಕ್, ಸದಾನಂದಗೌಡ, ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದಾರೆ.
ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸದಿಂದ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.
Post a comment
Log in to write reviews