
ಬೆಂಗಳೂರು: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ಸರ್ಕಾರದ ಮೊದಲ ಸಮಗ್ರ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸಲಿದ್ದಾರೆ. ಈ ವೇಳೆ ಕರ್ನಾಟಕದ ಸಿಎಂ ಸಿದ್ದರಾಮಯ್ಯಗೆ ಭಾಗವಹಿಸಲು ಆಹ್ವಾನಿಸಿದ್ದಾರೆ
ದೆಹಲಿಯಲ್ಲಿ ಜೂ.22ರಂದು ನಡೆಯುವ ಪ್ರೀ ಬಜೆಟ್ ಸಭೆಯಲ್ಲಿ ರಾಜ್ಯದ ಪರ ಭಾಗವಹಿಸಲು ಸಿಎಂಗೆ ನಿರ್ಮಲಾ ಸೀತರಾಮನ್ ಆಹ್ವಾನ ನೀಡಿದ್ದಾರೆ. ಪ್ರತಿಕ್ರಿಹಿಸಿದ ಸಿಎಂ ಸಭೆಯಲ್ಲಿ ಭಾಗಿಯಾಗಲು ಅಹ್ವಾನಿಸಿದ್ದಕ್ಕೆ ಧನ್ಯವಾದಗಳು ತಿಳಿಸಿದ್ದಾರೆ. ಜೂ.22ರಂದು ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿದೆ. ಹಾಗಾಗಿ ನಾನು ಮೀಟಿಂಗ್ ನಲ್ಲಿ ಭಾಗಿಯಾಗಲು ಸಾಧ್ಯವಿಲ್ಲ. ನನ್ಮ ಬದಲು ನನ್ನ ಸಂಪುಟದ ಸಹೋದ್ಯೋಗಿ ಸಚಿವ ಕೃಷ್ಣಭೈರೇಗೌಡ ಭಾಗಿ ಆಗ್ತಾರೆ ಎಂದು ಸಚಿವೆ ನಿರ್ಮಲಾ ಸೀತರಾಮನ್ ಪತ್ರಕ್ಕೆ ಸಿಎಂ ಉತ್ತರ ನೀಡಿದ್ದಾರೆ.
Poll (Public Option)

Post a comment
Log in to write reviews