
ಈ ಹಿಂದೆ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದ ಸಿ.ಪಿ. ಯೋಗೇಶ್ವರ್ ಇದೀಗ ಮತ್ತೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸಿ.ಪಿ. ಯೋಗೇಶ್ವರ್ ಅವರನ್ನೇ ಕಣಕ್ಕಿಳಿಸಲಾಗಿದೆ. ಈ ಮಧ್ಯೆ ತಂದೆಯ ವಿರುದ್ಧ ಅವರ ಮಗಳು ನಿಶಾ ಯೋಗೇಶ್ವರ್ ದಿನಕ್ಕೊಂದು ವಿಡಿಯೋ ರಿಲೀಸ್ ಮಾಡುತ್ತಿದ್ದಾರೆ.
ನನ್ನ ಜೀವನವನ್ನು ಮತ್ತೆ ಹೊಸದಾಗಿ ಕಟ್ಟಿಕೊಳ್ಳಲು ಒಬ್ಬಳೇ ಬಾಂಬೆಗೆ ತೆರಳಿ ಕಚೇರಿಗಳಿಗೆ ಅಲೆದೆ. ಯಾವ ಅವಕಾಶಗಳೂ ಸಿಗಲಿಲ್ಲ. ಅಲ್ಲಿಂದ ವಾಪಸ್ ಕರೆಸಿಕೊಳ್ಳಲು ಅಪ್ಪ ತುಂಬಾ ಪ್ರಯತ್ನಪಟ್ಟರು. ಅವರ ಮಾತು ಕೇಳಿ 2016ರಲ್ಲಿ ವಾಪಸ್ ಬಂದೆ. ಅನಂತರ ಅವರ ಪರವಾಗಿ ಚುನಾವಣೆಯಲ್ಲಿ ಪ್ರಚಾರ ಮಾಡಿದ್ದೆ. ಇಬ್ಬರೂ ಒಟ್ಟಾಗಿ ಬ್ಯುಸಿನೆಸ್ ಮಾಡೋಣ ಎಂದು ಭರವಸೆ ನೀಡಿದರು. ಇದನ್ನು ನಂಬಿ ನಾನು ಸ್ವತಂತ್ರವಾಗಿ ಬದುಕು ಕಟ್ಟಿಕೊಳ್ಳಬಹುದು ಎಂದುಕೊಂಡಿದ್ದೆ. ನನಗೆ ಲೋಕಸಭಾ ಚುನಾವಣೆಯ ಟಿಕೆಟ್ ಸಿಗಬಹುದು ಎಂಬ ಚರ್ಚೆಗಳು ಕೂಡ ಆಗಿದ್ದವು. ಅದನ್ನೂ ಕೂಡ ತಂದೆಯೇ ತಪ್ಪಿಸಿದ್ದಾರೆ. ನನಗೆ ನನ್ನ ಜೀವನದಲ್ಲಿ ಏನು ನಡೆಯುತ್ತಿದೆ ಎಂಬುದೇ ಅರ್ಥವಾಗಲಿಲ್ಲ ಎಂದು ನಿಶಾ ಯೋಗೇಶ್ವರ್ ಹೇಳಿದ್ದಾರೆ.
Poll (Public Option)

Post a comment
Log in to write reviews