ಗುಜರಾತ್ ಅಗ್ನಿದುರ್ಘಟನೆ ಬೆಂಗಳೂರಿನಲ್ಲಿ ಮರುಕಳಿಸಬಾರದು: ಡಿಸಿಎಂ ಡಿ.ಕೆ. ಶಿ

ಗುಜರಾತಿನ ರಾಜ್ ಕೋಟ್ ನ ಮನರಂಜನಾ ಕೇಂದ್ರದಲ್ಲಿ ಶನಿವಾರ ಸಂಜೆ ಸಂಭವಿಸಿರುವ ಅಗ್ನಿದುರಂತದಿಂದಾಗಿ ರಾಜ್ಯ ಸಕಾ೯ರ ಎಚ್ಚೆತ್ತುಕೊಂಡಂತಿದೆ. ಬೆಂಗಳೂರಿನಲ್ಲಿರುವ ಪ್ರತಿಷ್ಠಿತ ಮಾಲ್ಗಳಲ್ಲಿ ಅಗ್ನಿ ದುರಂತ ಸೇರಿದಂತೆ ಎಲ್ಲಾ ರೀತಿಯ ಅನಾಹುತ ತಪ್ಪಿಸಲು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಡಿ ಕೆ ಶಿವಕುಮಾರ್ ಪತ್ರ ಬರೆದಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್‌ರವರಿಗೆ ಗುಜರಾತಿನ ರಾಜ್ ಕೋಟ್ ನ ಮನರಂಜನಾ ಕೇಂದ್ರದಲ್ಲಿ ಸಂಭವಿಸಿರುವ ಅಗ್ನಿದುರಂತ ಅತ್ಯಂತ ಕಳವಳಕಾರಿ. ಈ ದುರಂತ ಎಚ್ಚರಿಕೆ ಗಂಟೆ, ಬೆಂಗಳೂರಿನಲ್ಲಿರುವ ಮಾಲ್ ಹಾಗೂ ಇತರೆ ಜನನಿಬಿಡ ಪ್ರದೇಶದಲ್ಲಿ ಅಗ್ನಿ ದುರಂತ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ನಡೆಸಬೇಕು ಎಂದು ಆದೇಶ ನೀಡಿದ್ದಾರೆ.
ಎಲ್ಲಾ ಜನನಿಬಿಡ ಕೇಂದ್ರಗಳಲ್ಲಿ ಈಗಾಗಲೇ ಸೂಚಿಸಿರುವ ರಕ್ಷಣಾ ನಿಯಮಗಳ ಪಾಲನೆ ಸರಿಯಾದ ರೀತಿಯಲ್ಲಿ ನಡೆಯುತ್ತಿದೆಯೆ ಎಂದು ಪರಿಶೀಲಿಸಬೇಕು. ಗುಜರಾತ್ ನಂತಹ ದುರ್ಘಟನೆ ಬೆಂಗಳೂರಿನ ಯಾವುದೇ ಭಾಗದಲ್ಲಿಯೂ ನಡೆಯಬಾರದು ಎಂದು ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದ್ದಾರೆ.
Poll (Public Option)

Post a comment
Log in to write reviews