ಟಾಪ್ 10 ನ್ಯೂಸ್
ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಜೆ.ಪಿ.ನಡ್ಡಾ
ನವದೆಹಲಿ: ಮಮತಾ ಬ್ಯಾನರ್ಜಿ ಆಡಳಿತದ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತವಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಟೀಕಿಸಿದರು. ಪಶ್ಚಿಮ ಬಂಗಾಳದ ಉತ್ತರ ದಿನಜ್ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ದಂಪತಿ ಮೇಲೆ ಬಿದಿರಿನ ಕೋಲಿನಿಂದ ಅಮಾನುಷವಾಗಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗಿರುವ ವಿಚಾರವಾಗಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿದ್ದು, ತೃಣಮೂಲ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದಿಂದ ಭಯಾನಕ ವೀಡಿಯೊ ಪ್ರಸಾರವಾಗಿದೆ. ಇದು ದಬ್ಬಾಳಿಕೆಯ ಆಡಳಿತದಲ್ಲಿ ಮಾತ್ರ ನಡೆಯಬಹುದಾದ ಕ್ರೌರ್ಯಗಳನ್ನು ನೆನಪಿಸುತ್ತದೆ. ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರು ಈ ಘಟನೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಬಿಗಡಾಯಿಸಿದೆ ಎಂದು ನಡ್ಡಾ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ
Post a comment
Log in to write reviews