
ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೈಯಾಲಿಕಾವಲ್ ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.
ಹಾಗೆಯೇ ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದರು.
Poll (Public Option)

Post a comment
Log in to write reviews