
ಬೆಂಗಳೂರು: ರಾಜ್ಯಾದ್ಯಂತ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳು ಕೊಬ್ಬು ಬಳಕೆ ಮಾಡಲಾಗುತ್ತಿತ್ತು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ನೀಡಿದ್ದ ಸ್ಫೋಟಕ ಹೇಳಿಕೆ ಸದ್ಯ ದೇಶದ್ಯಾಂತ ಸುದ್ದಿಯಾಗಿದೆ. ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಆರೋಪ ಚರ್ಚೆ ನಡುವೆ ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ ಹೊರಡಿಸಲಾಗಿದೆ.
ಇನ್ನೂ ಇದೇ ವಿಷಯ ರಾಜಕೀಯ ವಾಗ್ವಾದಕ್ಕೂ ವೇದಿಕೆ ಆಗಿದೆ. ಈ ಮಧ್ಯೆ ಮುಜರಾಯಿ & ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಸೂಚನೆಯ ಮೇರೆಗೆ ಸುತ್ತೋಲೆ ಹೊರಡಿಸಿರುವ ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿದೆ.
Poll (Public Option)

Post a comment
Log in to write reviews