
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಜಲಾವೃತವಾಗಿ ಅಲ್ಲಿಯ ನಿವಾಸಿಗಳನ್ನು ಬೇರೆ ಕಡೆ ಸ್ಥಳಾಂತರಿಸಲಾಗಿದೆ. ಇನ್ನೂ ಕೇವಲ 10 ದಿನಗಳಲ್ಲಿ 3ನೇ ಬಾರಿ ಜಲಾವೃತವಾಗಿದ್ದ ಈ ಅಪಾರ್ಟ್ಮೆಂಟ್‌ಗೆ ಇದೀಗ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.
ಹೌದು…. ಹೆಣ್ಣೂರಿನಲ್ಲಿ ಕಟ್ಟಡ ಕುಸಿತದ ಅವಘಡದ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ ಅಧಿಕಾರಿಗಳು ಇದೀಗ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್‌ಗೆ ನೊಟೀಸ್ ಜಾರಿ ಮಾಡಿದ್ದಾರೆ. ಯಲಹಂಕ ವಲಯ ಜಂಟಿ ಆಯುಕ್ತರಿಂದ ನೊಟೀಸ್ ಜಾರಿಯಾಗಿದೆ. ಈ ಅಪಾರ್ಟ್ಮೆಂಟ್ ಸುತ್ತ 8 ಅಡಿ ಎತ್ತರದ ಆರ್.ಸಿ.ಸಿ. ತಡೆಗೋಡೆ ನಿರ್ಮಿಸಲು ಸೂಚನೆ ನೀಡಲಾಗಿದೆ. ಈಗಿರುವ ಕಾಂಪೌಂಡ್ ಮತ್ತೆ ಕುಸಿತ ಕಾಣುತ್ತಿದೆ. ಇದರಿಂದ ಮಳೆ ನೀರು ಒಳಗೆ ನುಗ್ಗುತ್ತಿದೆ.
ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಸುತ್ತಲೂ ನಿರ್ಮಿಸಿರುವ ಕಲ್ಲು ಕಟ್ಟಡದ ಕಾಂಪೌಂಡ್ ಗೋಡೆಯು ಶಿಥಿಲಾವಸ್ಥೆಯಲ್ಲಿದೆ. ಕಾಂಪೌಂಡ್ ನಿಂದ ಮಳೆ ನೀರು ಅಪಾರ್ಟ್‌ಮೆಂಟ್‌ನ ಒಳಭಾಗಕ್ಕೆ ಹರಿದು ಬರುತ್ತಿರುವುದರಿಂದ ಈಗಿನ ಕಾಂಪೌಂಡ್ ಗೋಡೆಯನ್ನು ತೆರವುಗೊಳಿಸಿ ಹೊಸದಾಗಿ ಸುಮಾರು 8 ಅಡಿಗಳ ಎತ್ತರದ ಆರ್.ಸಿ.ಸಿ. ತಡೆಗೋಡೆಯನ್ನು ಅಪಾರ್ಟ್ಮೆಂಟ್ ಸುತ್ತಲೂ ನಿರ್ಮಿಸಲು ಸೂಚನೆ ನೀಡಲಾಗಿದೆ. ಈ ಮೂಲಕ ಮಳೆ ನೀರು, ಅಪಾರ್ಟ್ ಮೆಂಟ್‌ನ ಒಳಭಾಗಕ್ಕೆ ಹರಿಯದಂತೆ ತಡೆಯಲು ಸೂಚನೆ ನೀಡಲಾಗಿದೆ.
Poll (Public Option)

Post a comment
Log in to write reviews