
ಮಂಡ್ಯ: ಶಾಲೆಯ ಹೆಣ್ಣುಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕ ಶಿಕ್ಷಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ.
ಯೋಗಿ ಎಂಬಾತ ವಿಕೃತ ಕಾಮುಕ ಶಿಕ್ಷಕ. ಈತ ತನ್ನ ಬಳಿ ಕ್ರೀಡೆ ಹಾಗೂ ಚಿತ್ರಕಲೆ ಕಲಿಯಲು ಬರುತ್ತಿದ್ದ ವಿದ್ಯಾರ್ಥಿನಿಯರ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದೆ. ಅಲ್ಲದೆ ಕೆಲ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ ಕಾನೂನು ಪರಿವೀಕ್ಷಣಾಧಿಕಾರಿ ಎಸ್.ಎಂ.ಶೈಲಜಾ ಅವರಿಗೆ ನಾಲ್ವರು ವಿದ್ಯಾರ್ಥಿನಿಯರು ಈ ಬಗ್ಗೆ ಸವಿಸ್ತಾರವಾಗಿ ಹೇಳಿಕೆ ನೀಡಿದ್ದಾರೆ. ಹೇಳಿಕೆ ಆಧರಿಸಿ ದೂರು ದಾಖಲಿಸಲಾಗಿದೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು 15-17 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಆರೋಪಿ ಶಿಕ್ಷಕ ಇದೇ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಯಾಗಿದ್ದು ಆತನೂ ಕೂಡ ಶಾಲೆ ಪಕ್ಕದಲ್ಲಿ ತರಬೇತಿ ಕೇಂದ್ರವನ್ನು ತೆಗೆದಿದ್ದ ಎಂದು ತಿಳಿದುಬಂದಿದೆ.
Poll (Public Option)

Post a comment
Log in to write reviews