
ಬೆಂಗಳೂರು: 6ನೇ ಮಹಡಿಯಿಂದ ಆಯತಪ್ಪಿ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ (Nursing Student Dies) ಬೆಂಗಳೂರು ನಗರದ ಹೊರವಲಯದ ಸೋಲದೇವಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿ ಅತುಲ್ಯ. ಎಂದು ತಿಳಿದು ಬಂದಿದೆ.ಧನ್ವಂತರಿ ಕಾಲೇಜಿನಲ್ಲಿ ಯುವತಿ ನರ್ಸಿಂಗ್ ಓದುತ್ತಿದ್ದಳು. ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ನರ್ಸಿಂಗ್ ಕೋರ್ಸ್‌ಗೆ ಸೇರಿಕೊಂಡಿದ್ದಳು. ಆರನೇ ಮಹಡಿಯಲ್ಲಿ ಇರುವಾಗ ಯುವತಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. ಭಾನುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಸೋಲದೇವಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews