2024-12-24 07:39:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಂದು ಸಂಜೆಯಿಂದ ಆರು ದಿನ ಎಣ್ಣೆ ಸಿಗಲ್ಲ

ಬೆಂಗಳೂರು: ರಾಜ್ಯದಲ್ಲಿ ಜೂನ್ 1 ರಿಂದ 6 ರ ವರೆಗೆ ವೈನ್ ಶಾಪ್, ಎಂಆರ್ಪಿ ಔಟ್ಲೇಟ್ಗಳು ಬಂದ್ ಆಗಲಿದೆ. 
ವಿಧಾನ ಪರಿಷತ್ ಚುನಾವಣೆ ಕಾರಣದಿಂದ ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಜೂನ್ 1 ರ ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.
ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೊರಡಿಸಲಾಗಿದೆ. ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಇರುವುದಿಲ್ಲ.
ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತ ಎಣಿಕೆ ಸಲುವಾಗಿ ಬೆಂಗಳೂರು ಜಿಲ್ಲಾಡಳಿತ ಮದ್ಯ ಮಾರಾಟ ಬಂದ್ ಮಾಡುವಂತೆ ಆದೇಶ ಹೊರಡಿಸಿದೆ.  ಇದಲ್ಲದೇ ಜೂನ್ 3 ರಂದು ಪದವೀಧರ ಕ್ಷೇತ್ರ ಚುನಾವಣೆಗೆ ಮತದಾನ ನಡೆಯುವುದರಿಂದ ಇಂದು ಸಂಜೆ 4 ಗಂಟೆಯಿಂದಲೇ ಬಾರ್ ಬಂದ್ ಆಗಲಿದೆ. 
ಜೂನ್ 4 ರಂದು ದೇಶದ್ಯಾಂತ ಲೋಕಸಭಾ ಚುನಾವಣೆಯ ಮತ ಎಣಿಕೆ ನಡೆಯಲಿರುವ ಹಿನ್ನಲೆಯಲ್ಲಿ ಅಂದೂ ಕೂಡ ಮದ್ಯ ಮಾರಾಟ ಸಂಪೂರ್ಣ ಬಂದ್ ಆಗಲಿದೆ. ಜೂನ್ 6 ರಂದು ಎಂಎಲ್ಸಿ ಮತ ಎಣಿಕೆ ಇರುವ ಕಾರಣ ಅಂದೂ ಸಹ ಬಾರ್ ಬಂದ್ ಮಾಡುವಂತೆ ಬೆಂಗಳೂರು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. ಹೀಗಾಗಿ ವಾರವಿಡೀ ಮದ್ಯ ಪ್ರಿಯರಿಗೆ ಎಣ್ಣೆ ಸಿಗುವುದು ಕಷ್ಟವಾಗಲಿದೆ.

Post a comment

No Reviews