ಮೈಸೂರು: ಗೃಹ ಪ್ರವೇಶದ ಊಟ ಸೇವಿಸಿ ವೃದ್ಧೆ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಮೈಸೂರು ಜಿಲ್ಲೆ ಮಾರ್ಬಳ್ಳಿಯಲ್ಲಿ ನಡೆದಿದೆ.
ಶಿವಮ್ಮ (65) ಮೃತಪಟ್ಟವರು. ಮಾರ್ಬಳ್ಳಿಯಲ್ಲಿ ಭಾನುವಾರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ಗ್ರಾಮದ ಜನರಲ್ಲಿ ವಾಂತಿ ಭೇದಿ ಶುರುವಾಗಿದೆ. 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ರಾಮಕ್ಕೆ ಆರೋಗ್ಯಾಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.
Post a comment
Log in to write reviews