
ಕಾರವಾರ: ಕರಾವಳಿ ಜಿಲ್ಲೆಗಳಲ್ಲಿ ಸುರಿದ ಭಾರೀ ಮಳೆಯಿಂದ ಹಳೆಯ ಕಟ್ಟಡದ ಗೋಡೆ ನೆನೆದು ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಅಸ್ನೋಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆರವ ತೊರ್ಲೆಬಾಗ ಮಜಿರೆಯಲ್ಲಿ ನಡೆದಿದೆ.
ಗುಲಾಬಿ ರಾಮಚಂದ್ರ ಮಾಂಜ್ರೇಕರ (70) ಮೃತ ವೃಧ್ದೆ ಚಿತ್ತಾಕುಲದಲ್ಲಿ ಹಣ್ಣು ವ್ಯಾಪಾರ ಮಾಡುತ್ತಾ ಜೀವನ ನಡೆಸುತ್ತಿದ್ದ ಗುಲಾಬಿ ಮಧ್ಯಾಹ್ನ ತಮ್ಮ ಮನೆಯ ಪಕ್ಕದಲ್ಲಿದ್ದ ಹಳೆಯ ಕಟ್ಟಡದಲ್ಲಿ ಹಸುಗಳಿಗೆ ಗಂಜಿ ನೀಡಲು ತೆರಳಿದ್ದಾರೆ. ಈ ವೇಳೆ ಮಳೆಗೆ ನೆನೆದ ಮಣ್ಣಿನ ಗೋಡೆ ಕುಸಿದಿದ್ದು ಮಹಿಳೆ ಸಂಪೂರ್ಣವಾಗಿ ಮುಚ್ಚಿಹೋಗಿದ್ದರು.
ಹೀಗಾಗಿ ಮಹಿಳೆಯನ್ನು ಸ್ಥಳೀಯರು ಗಮನಿಸಿರಲಿಲ್ಲ. ರಾತ್ರಿ ಸುರಿದ ಮಳೆಯಿಂದಾಗಿ ಗೋಡೆಯ ಮಣ್ಣು ತೊಳೆದು ಹೋಗಿದ್ದು ಮಹಿಳೆಯ ಕಾಲು ಸ್ಥಳೀಯರಿಗೆ ಕಾಣಿಸಿದೆ. ಬಳಿಕ ಸ್ಥಳಕ್ಕೆ ತಹಸೀಲ್ದಾರ ನಿಶ್ಚಲ ನರೋನಾ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಚಿತ್ತಾಕುಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Poll (Public Option)

Post a comment
Log in to write reviews