ಚಿಕ್ಕಮಗಳೂರು: ವರ್ಷಕ್ಕೆ ಒಮ್ಮೆ ದರ್ಶನ ಕರುಣಿಸುವ ದೇವಿರಮ್ಮನಿಗೆ ವಿಶೇಷ ಪೂಜೆ ಸುಮಾರು 3800 ಅಡಿಗಳಷ್ಟು ಎತ್ತರದ ಬೆಟ್ಟದಲ್ಲಿ ನೆಲೆಸಿರುವ ದೇವಿರಮ್ಮನ ದರ್ಶನ ಪಡೆಯಲು ಪ್ರತಿ ವರ್ಷ ಅಪಾರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇನ್ನೂ ಇಲ್ಲಿಗೆ ಬರುವ ಭಕ್ತರು ಬರಿಗಾಲಲ್ಲಿ ಕಾಡು-ಮೇಡು ಅಲೆದು ದೇವಿಯ ದರ್ಶನ ಪಡೆದು ಪಾವನರಾಗುತ್ತಾರೆ. ವರ್ಷಕ್ಕೊಮ್ಮೆ ದರ್ಶನ ನೀಡುವ ದೇವಿರಮ್ಮನ ತಾಯಿಯನ್ನ ನೋಡಲು ಈ ಭಾರೀ ನಿರೀಕ್ಷೆಗೂ ಮೀರಿದ ಭಕ್ತರು ಆಗಮಿಸುತ್ತಿದ್ದಾರೆ. ಪ್ರತಿ ವರ್ಷ 50 ಸಾವಿರಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುತ್ತಿದ್ದರು. ಆದರೆ, ಈ ವರ್ಷ ನಿನ್ನೆ ಸಂಜೆಯಿಂದ ಈವರೆಗೆ ಬೆಟ್ಟ ಹತ್ತಿದ ಭಕ್ತರ ಸಂಖ್ಯೆ ಲಕ್ಷದ ಗಡಿ ದಾಟಿದೆ.
ಇನ್ನೂ ಪ್ರತಿ ವರ್ಷ ದೀಪಾವಳಿ ನರಕ ಚತುರ್ದಶಿಯ ದಿನ ಬೆಟ್ಟದಲ್ಲಿರುವ ದೇವಿರಮ್ಮನ ದೇವಿಗೆ ವಿಶೇಷ ಪೂಜೆ ನಡೆಯುತ್ತದೆ. ಆ ಪೂಜೆಯನ್ನ ನೋಡಿ ಕಣ್ತುಂಬಿಕೊಳ್ಳಲು ಭಕ್ತರು ಬಿಂಡಿಗ ಗ್ರಾಮಕ್ಕೆ ಅಪಾರ ಭಕ್ತರು ಬರುತ್ತಾರೆ. ಕಲ್ಲು-ಬಂಡೆ, ಮುಳ್ಳುಗಳ ಬೆಟ್ಟದಲ್ಲಿ ಭಕ್ತರು ನರಕ ಚತುದರ್ಶಿ ಹಿಂದಿನ ದಿನ ಸಂಜೆ ನಾಲ್ಕು ಗಂಟೆಯಿಂದಲೇ ಬೆಟ್ಟ ಹತ್ತಲು ಶುರು ಮಾಡಿ ರಾತ್ರೋರಾತ್ರಿ ಕೆಳಗಿಳಿಯುತ್ತಾರೆ. ಬೆಟ್ಟವನ್ನೇರುವಾಗಿ ಕೊಂಚ ಎಡವಿದರೂ ಪಾತಾಳ ಸೇರುವುದು ಗ್ಯಾರಂಟಿ. ಸುರಿಯುವ ಮಳೆಯಲ್ಲೇ ಭಕ್ತರು ಬೆಟ್ಟವನ್ನು ಏರಿ ವರ್ಷದಲ್ಲಿ ಒಮ್ಮೆ ಮಾತ್ರ ದರ್ಶನ ನೀಡುವ ಶಕ್ತಿ ದೇವತೆ ದೇವಿರಮ್ಮ ನನ್ನ ನೋಡಿ ಕಣ್ತುಂಬಿಕೊಳ್ಳುತ್ತಾರೆ. ಸಮುದ್ರಮಟ್ಟದಿಂದ ಸರಿ ಸುಮಾರು 3800 ಅಡಿ ಎತ್ತದಲ್ಲಿರೋ ದೇವಿರಮ್ಮನ ಬೆಟ್ಟದಲ್ಲಿ ವರ್ಷಕ್ಕೊಮ್ಮೆ ಮಾತ್ರ ಪೂಜೆ ನಡೆಯುತ್ತದೆ.
Post a comment
Log in to write reviews