2024-11-08 08:17:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲುಷಿತ ನೀರು ಸೇವಿಸಿ ಓರ್ವ ಸಾವು 12 ಜನ ಅಸ್ವಸ್ಥ!

ಮೈಸೂರು :ಕಲುಷಿತ ನೀರು ಸೇವಿಸಿ, ಓರ್ವ ಮೃತಪಟ್ಟಿದ್ದು 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

 ಗೋವಿಂದೇಗೌಡ (65 ವರ್ಷ) ಮೃತದುರ್ದೈವಿ ಎಂದು ತಿಳಿದು ಬಂದಿದೆ. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್​​ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.

ಮೃತ ಗೋವಿಂದೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಜನರ ಆರೋಗ್ಯ ಪರೀಕ್ಷೆ ನಡೆಸಿದರು.

Post a comment

No Reviews