
ದೆಹಲಿ: ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ.
ಟರ್ಮಿನಲ್-1 ದೇಶೀಯ ವಿಮಾನ ಕಾರ್ಯಾಚರಣೆ ಮಾತ್ರ ಎಂದು ಹೇಳಿದ್ದಾರೆ. ಇಂಡಿಗೋ ಮತ್ತು ಸ್ಪೈಸ್ ಜೆಟ್ ನ ಟರ್ಮಿನಲ್ 1 ನಿಂದ ಹೊರಡುವ ಎಲ್ಲಾ ವಿಮಾನಗಳು ಇಂದು ಮಧ್ಯಾಹ್ನ 2 ಗಂಟೆಯವರೆಗೆ ರದ್ದುಗೊಳಿಸಲಾಗಿದೆ. ಈಗಾಗಲೇ ದೆಹಲಿ ಅಗ್ನಿಶಾಮಕ ಸೇವೆ ಡಿಎಫ್ಎಸ್ ಸ್ಥಳಕ್ಕೆ ಧಾವಿಸಿದ್ದು, ಇನ್ನು ಮಳೆಯಿಂದ ಕ್ಯಾಬ್ ಗಳು ಸೇರಿದಂತೆ ಹಲವು ವಾಹನಗಳು ಹಾನಿಗೊಳಗಾಗಿವೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಮೇಲ್ಛಾವಣಿಯ ಶೀಟ್ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಹೇಳಿಕೆ ಪ್ರಕಾರ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಹಳೆಯ ನಿರ್ಗಮನದ ಮುಂಭಾಗದಲ್ಲಿರುವ ಮೇಲಾವರಣದ ಒಂದು ಭಾಗವು ಇಂದು ಬೆಳಿಗ್ಗೆ ಭಾರೀ ಮಳೆಯಿಂದಾಗಿ ಕುಸಿದಿದೆ ಎಂದು ಹೇಳಿದ್ದಾರೆ. ಇದರಿಂದ ಕೆಲವರಿಗೆ ಗಾಯಗಳು ಆಗಿದೆ. ಈಗಾಗಲೇ ಎಲ್ಲಾ ನೆರವು ಮತ್ತು ವೈದ್ಯಕೀಯ ನೆರವು ಒದಗಿಸಲು ತುರ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ.
Poll (Public Option)

Post a comment
Log in to write reviews