ಹಾಸನ: ಬೇಲೂರು ತಾಲ್ಲೂಕಿನ ಹನಿಕೆ ಗ್ರಾಮದ ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿದಿದ್ದು, ಮಣ್ಣಿನಡಿ ಸಿಲುಕಿ ಓರ್ವ ಸಾವನ್ನಪ್ಪಿದನೆ, ಇಬ್ಬರು ಸ್ಥಿತಿ ಗಂಭೀರವಾಗಿದೆ.
ಹೊಳೆನರಸೀಪುರದ ದರ್ಶನ್ಕುಮಾರ್ (29) ಮೃತ ದುರ್ದೈವಿ. ವಸಂತ್ಕುಮಾರ್ ಹಾಗೂ ಲೋಕಪ್ಪ ಗಾಯಾಳುಗಳು
ಹಾಸನದ ಪ್ರಕಾಶ್ ಎಂಬುವವರು ಕೆರೆ ಕೋಡಿ ದುರಸ್ತಿ ಗುತ್ತಿಗೆ ಪಡೆದಿದ್ದು, ಕೆರೆ ಕೋಡಿ ಕೆಲಸ ಮಾಡುತ್ತಿದ್ದ ವೇಳೆ ದಿಢೀರ್ ಮಣ್ಣು ಕುಸಿದಿದೆ. ಇಲ್ಲಿ ಮೂವರು ಕೆಲಸ ಮಾಡುತ್ತಿದ್ದು, ಅದರಲ್ಲಿ ಹನಿಕೆ ಗ್ರಾಮದ ದರ್ಶನ್ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ವಸಂತ್ಕುಮಾರ್ ಹಾಗೂ ಲೋಕಪ್ಪ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೇಲೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Post a comment
Log in to write reviews