
ಚಿಕ್ಕಮಗಳೂರು: ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನು ಪಕ್ಷ ನಿರ್ಧಾರ ಮಾಡುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ವಿಧಾನ ಪರಿಷತ್ ಟಿಕಟ್ ಘೋಷಣೆ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1995 ರಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನು ಪಕ್ಷ ನಿರ್ಧಾರ ಮಾಡುತ್ತದೆ ಎಂದರು.
ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಸೋಮವಾರ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದರು.
ಸಿ.ಟಿ.ರವಿ ಅವರು ಚಿಕ್ಕಮಗಳೂರು ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ನಗರದ ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಲಾಯಿತು.
Poll (Public Option)

Post a comment
Log in to write reviews