
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.
ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.
ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ತಲುಪಿದ ಬಳಿಕ ಬಿಡುಗಡೆ ಮುರುಘಾಶ್ರೀ ಜೈಲಿನಿಂದ ಹೊರಗೆ ಬರಲಿದ್ದಾರೆ. ಹೊರಬಂದ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ.
Poll (Public Option)

Post a comment
Log in to write reviews