2024-09-19 05:02:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಮ್ಮವರೇ ನಮಗೆ ಮೋಸ ಮಾಡಿದ್ದಾರೆ : ಸತೀಶ್ ಜಾರಕಿಹೊಳಿ

ಚಿಕ್ಕೋಡಿ: ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಕಡಿಮೆ‌ ಲೀಡ್ ಸಿಕ್ಕಿದ್ದಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ನಮ್ಮವರೇ ನಮಗೆ ಮೋಸ ಮಾಡಿದ್ದಾರೆ ಅಂತ ಸಚಿವ ಸತೀಶ್‌ ಜಾರಕಿಹೊಳಿ ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷದರೇ ನಮ್ಮ ವಿರುದ್ಧ ತಿರುಗಿಬಿದ್ದಿದ್ದಾರೆ. ಅಥಣಿಯಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದವರಿಂದ ಚುನಾವಣೆಯಲ್ಲಿ ಮೋಸ ಆಗಿದೆ. ಮೊದಲೇ ಅವರು ಮೈಂಡ್ ಸೆಟ್ ಮಾಡಿಕೊಂಡಿದ್ರು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಮ್ಮ ಪರವಾಗಿ ಇದ್ರು. ಈ ಮೂಲಕ ಪರೋಕ್ಷವಾಗಿ ಲಕ್ಷ್ಮಣ ಸವದಿ ವಿರುದ್ಧ ಸತೀಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಕುಡಚಿ ಎಂಎಲ್‌ಎ ಮಹೇಂದ್ರ ತಮ್ಮಣ್ಣ ಅವರ ಸಂಬಂಧಿ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಿಕರಗೆ ಸಹಾಯ ಮಾಡಿದ್ದಾರೆ. ಈ ಬಗ್ಗೆ ಮಹೇಂದ್ರ ತಮ್ಮಣ್ಣವರ ವಿರುದ್ಧ ಹೈಕಮಾಂಡ್ ಗಮನಕ್ಕೆ ತರುತ್ತೇನೆ ಅಂತ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ.

Post a comment

No Reviews