
ಅರಮನೆ ಪ್ರವೇಶ ಟಿಕೆಟ್ ಹಾಗೂ ಪಾರ್ಕಿಂಗ್ ವ್ಯವಸ್ಥೆಯಲ್ಲಿ ಭಾರೀ ಅವ್ಯವಹಾರ ನಡೆದಿರುವುದು ಲೋಕಾಯುಕ್ತ ದಾಳಿಯಲ್ಲಿ ಕಂಡು ಬಂದಿದೆ. ದೂರು ಆಧರಿಸಿ ಲೋಕಾಯುಕ್ತ ಎಸ್ಪಿ ಸಚಿತ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಅರಮನೆ ಮಂಡಳಿ ಕಚೇರಿ ಹಾಗೂ ಪಾರ್ಕಿಂಗ್ ಲಾಟ್ ನಲ್ಲಿ ಲೆಕ್ಕವಿಡದ 4.10 ಲಕ್ಷ ರೂ ನಗದು ಪತ್ತೆಯಾಗಿದೆ. ಎರಡು ದಿನ ನಡೆದ ಕಾರ್ಯಾಚರಣೆಯಲ್ಲಿ ಸಾಕಷ್ಟು ಅವ್ಯವಹಾರಗಳ ನಡೆಸಿದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು
Poll (Public Option)

Post a comment
Log in to write reviews