
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಶೂಟಿಂಗ್ ವೈಯಕ್ತಿಕ 50 ಮೀಟರ್ ವಿಭಾಗದ ರೈಫಲ್ 3 ಪೊಸಿಷನ್ ನಲ್ಲಿ, ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ 3 ಪದಕಗಳನ್ನು ಗೆದ್ದಿದೆ.
50 ಮೀಟರ್ ರೈಫಲ್ 3 ಪೊಸಿಷನ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನ್ನುವ ಹೆಗ್ಗಲಿಕೆ ಸ್ವಪ್ನಿಲ್ ಪಾಲಾಗಿದೆ.
ಬುಧವಾರ ನಡೆದ ಶತೋಹು ಶೂಟಿಂಗ್ ರೇಂಜ್ ನಲ್ಲಿ ಅರ್ಹತಾ ಸುತ್ತಿನ ಸ್ಪರ್ಧೆಯಲ್ಲಿ ಸ್ವಪ್ನಿಲ್ ಅವರು ಏಳನೇ ಸ್ಥಾನ ಗಳಿಸಿ ಫೈನಲ್ ಪ್ರವೇಶಿಸಿದ್ದರು
8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4 ಅಂಕಗಳನ್ನು ಕಲೆಹಾಕುವ ಮೂಲಕ ಸ್ವಪ್ನಿಲ್ ಕುಸಾಲೆ ಮೂರನೇ ಸ್ಥಾನ ಪಡೆದರು.
Poll (Public Option)

Post a comment
Log in to write reviews