
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.
ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾ ಗೌಡ ನೇರವಾಗಿ ತಮ್ಮ ಮನೆಗೆ ಬಂದಿದ್ದರು. ಅಲ್ಲದೇ ರೇಣುಕಾಸ್ವಾಮಿಯ ಮೇಲೆ ಮೊದಲು ಹಲ್ಲೆ ಮಾಡಿದ್ದೇ ಪವಿತ್ರಾ ಗೌಡ ಎಂಬ ಮಾಹಿತಿಯೂ ತನಿಖಾಧಿಕಾರಿಗಳಿಗೆ ಲಭ್ಯವಾಗಿದೆ.
ಆರ್.ಆರ್.ನಗರದಲ್ಲಿರುವ ಪವಿತ್ರಾ ಗೌಡ ಮನೆಗೆ, ಆಕೆ ಮತ್ತು ಅವರ ಆಪ್ತ ಪವನ್ ಎಂಬವರನ್ನು ಕರೆದೊಯ್ಯಲಾಗಿದ್ದು, ಕೃತ್ಯ ನಡೆದ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ಪವಿತ್ರಾ ಗೌಡ ಹಲ್ಲೆ ಮಾಡಲು ಬಳಸಿದ ಚಪ್ಪಲಿಯನ್ನು ಜಪ್ತಿ ಮಾಡಲಾಗಿದೆ.
ಮತ್ತೊಂದೆಡೆ, ಹತ್ಯೆಯಾದ ಸ್ಥಳದಲ್ಲಿದ್ದ ಪವಿತ್ರಾ ಗೌಡ ಅವರ ಮ್ಯಾನೇಜರ್ ದೇವರಾಜ್ ಎಂಬಾತನನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
Poll (Public Option)

Post a comment
Log in to write reviews