ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆಗಿರುವ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಆಗಿದೆ. 120ಕ್ಕೂ ಹೆಚ್ಚು ದಿನಗಳ ಕಾಲ ಜೈಲಿನಲ್ಲಿ ಕಾಲ ಕಳೆದಿರುವ ಪವಿತ್ರಾ ಗೌಡ ಅವರ ಜೈಲು ವಾಸ ಮುಂದುವರಿಯಲಿದೆ. ಜಾಮೀನಿಗಾಗಿ ಅವರು ಹೈಕೋರ್ಟ್ ಮೊರೆ ಹೋಗಲಿದ್ದಾರೆ.
ಜಾಮೀನು ಪಡೆಯಬೇಕು ಎಂದು ಪ್ರಯತ್ನಿಸುತ್ತಿದ್ದ ಪವಿತ್ರಾ ಗೌಡ ಅವರಿಗೆ ನಿರಾಸೆ ಆಗಿದೆ. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ದರ್ಶನ್ ಎ2 ಆಗಿದ್ದಾರೆ. ಈ ಕೇಸ್ನಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಆದ ಬಳಿಕ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಅವರ ವಿಚಾರಣೆ ನಡೆದಿದ್ದು, ಇಂದು (ಅ.14) ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಆದೇಶ ನೀಡಿದೆ. ಪವಿತ್ರಾ ಗೌಡ ಅವರಿಗೆ ಜಾಮೀನು ಸಿಕ್ಕಿಲ್ಲ. ಹಾಗಾಗಿ ಅವರು ಪರಪ್ಪನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸುವುದು ಅನಿವಾರ್ಯ ಆಗಿದೆ.
Post a comment
Log in to write reviews