
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ ಶಿಫಾರಸುಗಳ ಜಾರಿ ಸಂಬಂಧ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಹೀಗಾಗಿ ಜುಲೈ 29 ಕ್ಕೆ ಸರ್ಕಾರಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ.
ಕಳೆದ ವಾರವಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ ನೇತೃತ್ವದಲ್ಲಿ 7 ನೇ ವೇತನ ಆಯೋಗ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಚರ್ಚೆ ನಡೆಸಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು.
ಆದರೆ, ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆಯಾಗದ ಹಿನ್ನೆಲೆ ಸರ್ಕಾರಿ ನೌಕರರಿಗೆ ನಿರಾಸೆಯುಂಟಾಗಿದೆ. ಕೆಲ ವರ್ಷಗಳಿಂದ ಸರ್ಕಾರಿ ನೌಕರರು 7ನೇ ವೇತನ ಆಯೋಗ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ತೀವ್ರ ಬೇಡಿಕೆ ಇಟ್ಟಿದ್ದರು. 7ನೇ ವೇತನ ಆಯೋಗದ ಶಿಫಾರಸ್ಸುಗಳ ಅನುಷ್ಠಾನದ ಕುರಿತು ಸಂಪುಟ ಸಭೆಯಲ್ಲಿ ಯಾವುದೇ ಚರ್ಚೆ ನಡೆಯದಿರುವುದರಿಂದ ಸರ್ಕಾರಿ ನೌಕರರು ತಮ್ಮ ಅಸಮಾಧಾನವನ್ನ ವ್ಯಕ್ತಪಡಿಸಿದ್ದಾರೆ. ಇನ್ನೂ ಬಹುದಿನಗಳಿಂದ ಸಿದ್ದರಾಮಯ್ಯ ಸರ್ಕಾರ ನಮ್ಮ ಬೇಡಿಕೆಯನ್ನ ಈಡೇಸುತ್ತದೆ ಎಂದು ಸರ್ಕಾರಿ ನೌಕರರು ಸಾಕಷ್ಟು ವಿಶ್ವಾಸವನ್ನ ಇಟ್ಟುಕೊಂಡಿದ್ದರು. ಆದರೆ, ಈ ಬಾರಿಯೂ ಸಂಪುಟದಲ್ಲಿ ಚರ್ಚೆಯಾಗದ ಹಿನ್ನೆಲೆ ಸರ್ಕಾರದ ವಿರುದ್ಧ ನೌಕರರು ಅಸಮಾಧಾನ ಹೊರಹಾಕಿದ್ದು, ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.
Poll (Public Option)

Post a comment
Log in to write reviews