
ಕೇರಳದ ಪ್ರಮುಖದಲ್ಲಿ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು, ವಾಹನ ಸವಾರರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೂ ಪ್ರಮುಖ ರಸ್ತೆ ದುರಸ್ತಿ ಕಾರ್ಯ ನಡೆಸದ ಹಿನ್ನಲೆ ವಾಹನ ಸವಾರರು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿರುವ ವಿಡಿಯೋವನ್ನು ಕೇರಳ ರಾಜ್ಯ ಕಾಂಗ್ರೆಸ್ ಸರ್ಕಾರ ಹಂಚಿಕೊಂಡಿದ್ದು, ನಿಮ್ಮ ಕಾರ್ಯಕ್ಕೆ ಜನರು ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇಡೀ ದೇಶ ಅಭಿವೃದ್ಧಿ ಕಡೆ ಮುಖ ಮಾಡುತ್ತಿದ್ದರೆ, ಇತ್ತ ಹಳ್ಳಿಗಳಲ್ಲಿ ಸರಿಯಾದ ರಸ್ತೆ ಸಂಪರ್ಕವಿಲ್ಲದೆ ಜನ ಪರದಾಡುತ್ತಿದ್ದಾರೆ, ದೇಶದಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್, ಜನರು ಕೆಸರಿನಲ್ಲಿ ಕಮಲ ನೆಡುವ ಮೂಲಕ ಪ್ರಧಾನಿ ಮೋದಿಯವರಿಗೆ ಜನ ಕೃತಜ್ಞತೆ ಸಲ್ಲಿಸುತ್ತಿದ್ದಾರೆ. ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ಅವರು ನಿರ್ಮಿಸಿದ ವಿಶ್ವದರ್ಜೆಯ ಇನ್ಫ್ರಾವನ್ನು ಒಮ್ಮೆ ನೋಡಿ ಎಂದು ಬರೆದುಕೊಂಡಿದ್ದಾರೆ.
Poll (Public Option)

Post a comment
Log in to write reviews