2024-12-24 07:16:52

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 50-75ರಷ್ಟು ಉದ್ಯೋಗ ಮೀಸಲಾತಿ

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಸಚಿವ ಸಂತೋಷ್‌ ಲಾಡ್ ಅವರು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು‌ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

Post a comment

No Reviews