ಟಾಪ್ 10 ನ್ಯೂಸ್
ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ. 50-75ರಷ್ಟು ಉದ್ಯೋಗ ಮೀಸಲಾತಿ: ಸಚಿವ ಸಂತೋಷ್ ಲಾಡ್

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಸಚಿವ ಸಂತೋಷ್ ಲಾಡ್ ಅವರು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ. ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.
Poll (Public Option)

Post a comment
Log in to write reviews