
ಹೈದರಾಬಾದ್: ಚಂದ್ರಬಾಬು ನೇತೃತ್ವದ ತೆಲುಗುದೇಶಂ ಪಾರ್ಟಿ ಜಯಭೇರಿ ಭಾರಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಖುದ್ದು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ಆಡಳಿತಾರೂಢ ವೈಎಸ್‌ಆರ್‌ಸಿ ಪಕ್ಷವನ್ನು ಸೋಲಿಸಿರುವ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಜಯಭೇರಿ ಭಾರಿಸಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮತ್ತು ಚಂದ್ರಬಾಬು ನಾಯ್ಡು ನಡುವಿನ ವೈಯಕ್ತಿಕ ಪ್ರತಿಷ್ಠೆಯ ಕಣವಾಗಿದ್ದ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ, ಬಿಜೆಪಿ, ಜನಸೇನಾ ಪಕ್ಷಗಳ ಮೈತ್ರಿ ಕೂಟ ಗೆಲುವು ಸಾಧಿಸುವ ಮೂಲಕ ಜಗನ್‌ಗೆ ಮರ್ಮಾಘಾತ ನೀಡಿದೆ. ಟಿಡಿಪಿ ಮೈತ್ರಿಕೂಟದ ಈ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದು, ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಕೂಟ ಬಹುಮತಕ್ಕಿಂತ ಹೆಚ್ಚಿನ ಸ್ಥಾನದಲ್ಲಿ ಮುನ್ನಡೆ ಪಡೆದಿದ್ದರೂ, ಇನ್ನೂ ಹಲವು ಕ್ಷೇತ್ರಗಳಲ್ಲಿ ಅಂತಿಮ ಫಲಿತಾಂಶ ಹೊರಬೀಳಬೇಕಿದೆ. ಅಲ್ಲದೆ, ಇಂಡಿಯಾ ಮೈತ್ರಿ ಕೂಟ ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ಬೆಂಬಲ ಕೋರುವ ಸಾಧ್ಯತೆ ಇರುವ ಕಾರಣ, ಅದಕ್ಕೂ ಮುನ್ನವೇ ನರೇಂದ್ರ ಮೋದಿ ಅವರು ಚಂದ್ರಬಾಬು ನಾಯ್ಡು ಅವರನ್ನು ಸಂಪರ್ಕಿಸಿ ಕೇಂದ್ರದಲ್ಲಿ ಸರ್ಕಾರ ರಚನೆ ವೇಳೆ ತಮ್ಮ ಜೊತೆಗಿರುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
Poll (Public Option)

Post a comment
Log in to write reviews