
ಇತ್ತೀಚೆಗೆ ನಗರದಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯ ಅನುಮಾನಾಸ್ಪದ ಸಾವಿನ ಪ್ರಕರಣ ಭೇದಿಸಿರುವ ಸಂಪಂಗಿರಾಮನಗರ ಠಾಣೆ ಪೊಲೀಸರು ಹೊರರಾಜ್ಯದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಒಡಿಶಾ ಮೂಲದ ರಂಜಿತ್ ಪ್ರಧಾನ್(30) ಮತ್ತು ರಮೇಶ್(32) ಬಂಧಿತರು. ಮೇ 10ರಂದು ಬೆಳಗ್ಗೆ ಮಿಷನ್ ರಸ್ತೆಯ ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಅಪರಿಚಿತನ ಮೃತದೇಹ ಪತ್ತೆಯಾಗಿತ್ತು. ಬಳಿಕ ಆ ಮೃತ ವ್ಯಕ್ತಿ ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ(20) ಎಂಬುದು ಗೊತ್ತಾಗಿತ್ತು. ಕುಟುಂಬದವರು ಸತ್ಯನದು ಅಸಹಜ ಸಾವಲ್ಲ ಇದು ಕೊಲೆ ಎಂದು ಆರೋಪಿಸಿದ್ದರು. ಸಂಶಯಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇದೀಗ ಪ್ರಕರಣವನ್ನು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Tags:
Poll (Public Option)

Post a comment
Log in to write reviews