
ಬೆಂಗಳೂರು: ಪೋಕ್ಸೋ ಕೇಸ್‌ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್ ಆದೇಶ ನೀಡಿದೆ. ಅಲ್ಲದೇ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ. ಬಿಎಸ್‌ವೈಗೆ ವಯಸ್ಸಾಗಿದೆ. ಅವರು ಓಡಿ ಹೋಗುವ ವ್ಯಕ್ತಿ ಅಲ್ಲ. ಸಹಜವಾದ ಅನಾರೋಗ್ಯ ಸಮಸ್ಯೆಗಳಿರುತ್ತೆ. ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಉತ್ತರಿಸಿದ್ದಾರೆ. ಹೀಗಾಗಿ ಬಂಧಿಸಿ ವಿಚಾರಣೆ ಮಾಡುವ ಅಗತ್ಯ ಇಲ್ಲ ಎಂದು ಹೈಕೋರ್ಟ್ ಹೇಳಿದೆ.
ಏನಿದು ಪ್ರಕರಣ..?
ಸಹಾಯ ಅರಸಿ ಯಡಿಯೂರಪ್ಪ ಅವರ ನಿವಾಸಕ್ಕೆ ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಬಿಎಸ್‌ವೈ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಂತ್ರಸ್ತೆ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಫೆಬ್ರವರಿನಲ್ಲಿ ತಮ್ಮ ಪುತ್ರಿ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ದೂರು ನೀಡಿದ್ದರು. ದೂರು ನೀಡಿದ್ದ ಅವರು ಆನಾರೋಗ್ಯದಿಂದ ಕಳೆದ ಮೇ.26 ರಂದು ಅವರು ಮೃತಪಟ್ಟಿದ್ದರು. ನಂತರದಲ್ಲಿ ರಾಜ್ಯ ಸರ್ಕಾರವು ಈ ಪೋಕ್ಸೊ ಕೇಸ್ ಅನ್ನು ಸಿಐಡಿಗೆ ಹಸ್ತಾಂತರಿಸಿತ್ತು.
Poll (Public Option)

Post a comment
Log in to write reviews