
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧದ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಿಸಲು ವಿಶೇಷ ಅಭಿಯೋಜಕರಾಗಿ ಅಶೋಕ್ ಎನ್.ನಾಯಕ್ ಅವರನ್ನು ನೇಮಕ ಮಾಡಲಾಗಿದೆ.
ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ವಿಚಾರಣೆಗೆ ಹಾಜರಾಗಿಲ್ಲ.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಈ ಮಹಿಳೆಯೋರ್ವರು ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದರು. ಅದರ ಮರುದಿನ ಈ ಪ್ರಕರಣದ ತನಿಖೆ ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆಯ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ. ಈ ಮಧ್ಯೆ ದೂರು ನೀಡಿರುವ ಮಹಿಳೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
Poll (Public Option)

Post a comment
Log in to write reviews