
ಮಂಗಳೂರು: ನಗರದಲ್ಲಿ ನಿನ್ನೆ ನಸುಕಿನ ಜಾವ ವೃದ್ಧ ದಂಪತಿಯನ್ನು ಹಲೈಗೈದು ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಖತರ್ನಾಕ್ ಚಡ್ಡಿ ಗ್ಯಾಂಗ್‌ನನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದಾರೆ.
ಪೊಲೀಸರು ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ನಡೆಸುತ್ತಿದ್ದ ವೇಳೆ, ಎಎಸ್ಐ ಒಬ್ಬರ ಮೇಲೆ ಹಲ್ಲೆ ನಡೆಸಿ ಚಡ್ಡಿ ಗ್ಯಾಂಗ್ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಕ್ಕೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರ ಕಾಲಿಗೆ ಗುಂಡೇಟು ಬಿದ್ದಿದ್ದು ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ. ಶೂಟೌಟ್ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Poll (Public Option)

Post a comment
Log in to write reviews