
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಗೆಳತಿ ಪವಿತ್ರಾ ಗೌಡ ಸೇರಿದಂತೆ 13 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ನಾಲ್ವರು ಆರೋಪಿಗಳು ತಲೆಮರೆಸಿಕೊಂಡಿದ್ದು, ನಾಲ್ವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಇಲ್ಲಿವರೆಗೆ ಬಂಧನವಾಗಿದ್ದ ಆರೋಪಿಗಳು ವಿಚಾರಣೆ ವೇಳೆ ಇನ್ನುಷ್ಟು ಹೆಸರುಗಳನ್ನು ಬಾಯ್ಬಿಟ್ಟಿದ್ದು, ಇವರಿಗೆ ಪೊಲೀಸರು ತಲಾಷ್ ಮಾಡುತ್ತಿದ್ದಾರೆ. ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು 13 ಮಂದಿಯನ್ನ ಬಂಧಿಸಿದ್ದಾರೆ.
ಕಿಡ್ನಾಪ್, ಕೊಲೆ, ಸಾಕ್ಷಿ ನಾಶ ಹೀಗೆ ಹಲವು ಆರೋಪ ಕೇಳಿಬಂದಿದ್ದು, ಪೊಲೀಸರು ಒಬ್ಬೊಬ್ಬರ ಪಾತ್ರವನ್ನು ಎಳೆ-ಎಳೆಯಾಗಿ ತನಿಖೆ ಮಾಡುತ್ತಿದ್ದಾರೆ.
Poll (Public Option)

Post a comment
Log in to write reviews