ಟಾಪ್ 10 ನ್ಯೂಸ್
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಹಾಕಿದವನಿಗೆ ಪೊಲೀಸರು ಶೋಧ

ಬ ಮೇ 8- ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪಿಗಾಗಿ ವಿಮಾನ ನಿಲ್ದಾಣ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಟೈಮ್ ಬಾಂಬ್ ಇಡಲಾಗಿದೆ. ಅದು ಕೆಲವೇ ಗಂಟೆಗಳಲ್ಲಿ ಸ್ಪೋಟಗೊಳ್ಳಲಿದೆ ಎಂದು ಅಪರಿಚಿತ ಆರೋಪಿಯೊಬ್ಬ ಮೇ 2ರಂದು ಇ-ಮೇಲ್ ಮಾಡಿದ್ದನು. ಈ ಸಂದೇಶವನ್ನು ಗಮನಿಸಿದ ವಿಮಾನ ನಿಲ್ದಾಣದ ಅಕಾರಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಬಾಂಬ್ ಪತ್ತೆ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದಾಗ ಹುಸಿ ಸಂದೇಶ ಎಂಬುವುದು ಗೊತ್ತಾಗಿದೆ.
Tags:
Poll (Public Option)

Post a comment
Log in to write reviews