
ಹಾಸನ: ಹೊಗಳಿಕೆಯಿಂದ ಎಲ್ಲಾ ರಾಜಯಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪಕ್ಷ ರಾಜಕಾರಣ ಹಾಳಾಗಿ, ವ್ಯಕ್ತಿ ರಾಜಕಾರಣ ಮೆರೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಬೇಸರ ಹೊರಹಾಕಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹೊಗಳಿಕೆಯಿಂದ ಎಲ್ಲಾ ರಾಜಕೀಯ ಪಕ್ಷಗಳು ಹಾಳಾಗಿ ಹೋಗಿವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ವಾದ, ವಿವಾದ, ಪ್ರತಿವಾದ ಟೀಕೆ ಸಹಜ. ಅದು ಇಲ್ಲದೇ ಇದ್ದರೆ ಚಮಚಾಗಿರಿ ಮಾಡಿಕೊಂಡು ಕೂರಬೇಕಾಗುತ್ತದೆ. ಯಾರನ್ನೋ ಮೆಚ್ಚಿಸಲು ನೀನು ಸತ್ಯವಂತ ಎಂದು ಹೇಳೋದು ಎಷ್ಟು ಸರಿ? ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ, ಯಡಿಯೂರಪ್ಪ, ಕುಮಾರಸ್ವಾಮಿ ಹೀಗೆ ವ್ಯಕ್ಯಿ ರಾಜಕಾರಣ ಶುರುವಾಗಿದೆ. ದೇಶದಲ್ಲೇ ಈಗ ಪಕ್ಷ ರಾಜಕಾರಣ ಇಲ್ಲದಂತಾಗಿದೆ. ಎಲ್ಲರೂ ಮಾಡುವ ತಪ್ಪನ್ನೇ ನಾನು ಮಾಡಿದ್ರೆ ವಿಶೇಷ ಹೇಗಾಗ್ತೀನಿ? ಹಾಗಾಗಿ ನಾನು ಆ ತಪ್ಪು ನಾನು ಮಾಡಲು ಹೋಗಲ್ಲ. ಮತ್ತೊಬ್ಬನನ್ನು ಟೀಕೆ ಮಾಡಬೇಕಾದ್ರೆ ಮೊದಲು ನಾನು ಸರಿ ಇರಬೇಕು. ಇದನ್ನ ಎಲ್ಲರೂ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
Poll (Public Option)

Post a comment
Log in to write reviews