2024-09-19 04:36:56

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಿನಲ್ಲಿ ಆಗಸ್ಟ್ 13ರಂದು ವಿದ್ಯುತ್ ವ್ಯತ್ಯಯ? ಎಲ್ಲೆಲ್ಲಿ

ಬೆಂಗಳೂರಿನಲ್ಲಿ ಮತ್ತೆ ವಿದ್ಯುತ್ ವ್ಯತ್ಯಯದ ಪರ್ವ ಶುರುವಾಗಿದೆ. ನಿತ್ಯ ಹತ್ತು ಹಲವು ಕಡೆಗಳಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಕಟ್ ಮಾಡಲಾಗುತ್ತಿದೆ. ಮಂಗಳವಾರ ಆಗಸ್ಟ್​ 13 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 16:00 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ನಿರಂತರವಾಗಿ ವಿದ್ಯುತ್ ವ್ಯತ್ಯಯ(Power Cut) ಉಂಟಾಗುತ್ತಿದೆ, ವಿದ್ಯುತ್ ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಲಾಗುತ್ತಿದೆ. ಮಂಗಳವಾರ ಆಗಸ್ಟ್​ 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 66/11ಕೆ.ವಿ ಬಾಣಸವಾಡಿ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕಾರ್ಯವಿರುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ನಂದನ ಕಾಲೋನಿ, ಆಶೀರ್ವಾದ್ ಕಾಲೋನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್‌ಗ್ರೋವ್, ದೇವಮತ ಶಾಲೆ, ಅಮರ್‌ರೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ ಹೆಚ್.ಆರ್.ಬಿ.ಆರ್. , ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಬಡಾವಣೆ, ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲೂ.ಎಸ್. ಎಸ್.ಬಿ ವಾಟರ್‌ಟ್ಯಾಂಕ್ ನಲ್ಲಿ ಪವರ್ ಕಟ್ ಆಗಲಿದೆ.

ಅಲ್ಲದೆ ಹೆಣ್ಣೂರು ಗ್ರಾಮ, ಚೆಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‌ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥನಗರ ರಸ್ತೆ, ಎನ್.ಆರ್.ಐ ಲೇಔಟ್, ರಿಚಸ್‌ಗಾರ್ಡನ್, ಸುಂದರಾಜನೇಯದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‌ನಗರ, ಪಿ.ಎನ್.ಎಸ್. ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಹೆಚ್.ಬಿ.ಆರ್. 2ನೇ ಬ್ಲಾಕ್, ರಾಜ್‌ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರುರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೋ, ಸಿ.ಎಂ.ಆರ್.ರಸ್ತೆ, ನಂಜುಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್ ಈ ಭಾಗಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ.

ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‌ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‌ಅವೆನ್ಯೂ ಲೇಔಟ್, ನಂಜಪ್ಪಗಾರ್ಡನ್, ಸಿ.ಎನ್.ಆರ್. ಲೇಔಟ್, ಆರ್.ಎಸ್.ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ.ಶೆಟ್ಟಿ ರಸ್ತೆಯಲ್ಲಿ ಕೂಡ ವಿದ್ಯುತ್ ವ್ಯತ್ಯಯವಾಗಲಿದೆ.

Post a comment

No Reviews