
ಮೈಸೂರು: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ. ಫಲಿತಾಂಶದ ಬಳಿಕ ಶಾಸಕ ಪ್ರದೀಶ್ ಈಶ್ವರ್ ಅವರ ಈ ಹಿಂದಿನ ವಿಡಿಯೋ ಹಂಚಿಕೊಂಡು ಮಾಜಿ ಸಂಸದ ಪ್ರತಾಪ್ ಸಿಂಹ ಲೇವಡಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ “ಬ್ರೇಕಿಂಗ್ ನ್ಯೂಸ್: ಕೆಲವೇ ಗಂಟೆಗಳಲ್ಲಿ ಪ್ರದೀಪ್ ಈಶ್ವರ್ ರಾಜೀನಾಮೆ” ಎಂದು ಪೋಸ್ಟ್ ಹಾಕಿದ್ದು ಈ ಪೋಸ್ಟ್ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಇನ್ನ ಈ ಪೋಸ್ಟ್ ಕುರಿತು ಪರ-ವಿರೋಧ ಚರ್ಚೆಗಳು ಶುರುವಾಗುವ ಜೊತೆಗೆ ನೆಟ್ಟಿಗರು ಪ್ರದೀಪ್ ಈಶ್ವರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಮಾತನಾಡುವ ಭರದಲ್ಲಿ ನೀಡಿದ್ದ “ಕೆ ಸುಧಾಕರ್ ಗೆದ್ದರೆ ನಾನು ರಾಜೀನಾಮೆ ನೀಡುತ್ತೇನೆ” ಎಂಬ ಹೇಳಿಕೆ ಎಲ್ಲೆಡೆ ವೈರಲ್ ಆಗುತ್ತಿದೆ. ಲೋಕಸಭಾ ಚುನಾವಣೆ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮಾಜಿ ಸಚಿವ ಡಾ। ಕೆ.ಸುಧಾಕರ್ ಕಾಂಗ್ರೆಸ್ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ಧ 1,62,099 ಮತಗಳ ಗೆಲುವು ದಾಖಲಿಸಿ ಸಂಸತ್ ಗೆ ಆಯ್ಕೆಯಾಗಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ತಮ್ಮ ಸ್ಥಾನಕ್ಕೆ ಯಾವಾಗ ರಾಜೀನಾಮೆ ನೀಡುತ್ತಾರೆ ಎಂಬ ಚರ್ಚೆಗಳು ಜೋರಾಗಿದೆ..
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕೆ ಸುಧಾಕರ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದ ಪ್ರದೀಪ್ ಈಶ್ವರ್ ನಂತರದ ದಿನಗಳಲ್ಲಿ ನಿರಂತರವಾಗಿ ಸುಧಾಕರ ವಿರುದ್ಧ ವಾಕ್ಸಮರ ನಡೆಸುತ್ತಲೇ ಇದ್ದರು. ಅಲ್ಲದೇ ಲೋಕಸಭಾ ಚುನಾವಣೆಯಲ್ಲಿ ಸುಧಾಕರ್ ಗೆದ್ದು ತೋರಿಸಲಿ ಅಂತ ಸವಾಲು ಹಾಕಿದ್ದರು. ಈ ಎಲ್ಲ ಸವಾಲುಗಳಿಗೆ ಇದೀಗ ಉತ್ತರ ಸಿಕ್ಕಿದೆ.
ತಾನು ನೀಡಿದ್ದ ಹೇಳಿಕೆನೇ ಪ್ರದೀಪ್ ಈಶ್ವರ್‌ಗೆ ಕಂಟಕವಾಗಿ ಪರಿಣಮಿಸಿದ್ದು, ಜನರು ಸಾಮಾಜಿಕ ಜಾಲತಾಣಗಳಲ್ಲಿ ಪ್ರದೀಪ್ ಈಶ್ವರ್‌ಗೆ ಜಾಡಿಸುತ್ತಿದ್ದಾರೆ.
Poll (Public Option)

Post a comment
Log in to write reviews