
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ "ಹಂದಿ" ಪದ ಬಳಸಿ ಅವಹೇಳನ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಸಿದ್ದಾರೆ.
ಈ ಕುರಿತು ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸರ್ವೀಸ್ ಕಂಡಕ್ಟ್ ರೂಲ್ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ. ಜೊತೆಗೆ ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಹೀಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಕೇಡರ್ ಕಂಟ್ರೋಲ್ ಇದನ್ನು ಗಂಭೀರವಾಗಿ ಪರಿಗಣಿಸಲಿದೆ. ಕುಮಾರಸ್ವಾಮಿ ಅವರು ಯಾವತ್ತೂ ಯಾರ ಬಗ್ಗೆಯೂ ಹೀಗೆ ಅಸಭ್ಯ ಭಾಷೆ ಬಳಸಿದವರಲ್ಲ. ಮಾತನಾಡಿಲ್ಲ ಎಂದು ಹೇಳಿದರು.
Poll (Public Option)

Post a comment
Log in to write reviews