
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಬೆಂಗಳೂರಿಗೆ ಬರಲು ವಿಮಾನದ ಟಿಕೆಟ್ ಕಾಯ್ದಿರಿಸಿರಿಸಿದ್ದಾನೆ.
ಸೋಮವಾರದಂರು ವಿಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್, ಎಸ್ಐಟಿ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದ. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ಇರುವಿಕೆಯ ಸ್ಥಳದ ಬಗ್ಗೆ ಎಸ್ಐಟಿ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಇದರ ಫಲವಾಗಿ, ಜರ್ಮನಿಯ ಮ್ಯೂನಿಕ್ ನಿಂದ ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣಕ್ಕೆ ಪ್ರಜ್ವಲ್ ಬರುವುದು ದೃಢಪಟ್ಟಿದೆ. ಈ ಸಂಬಂಧ ಈಗಾಗಲೇ ಲುಫ್ತಾಸ್ಸಾ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ಹೆಸರಿನಲ್ಲಿ ಟಿಕೆಟ್ ಕಾಯ್ದಿರಿಸಲಾಗಿದೆ. ಟಿಕೆಟ್ ಮಾಹಿತಿಯಂತೆ ಜರ್ಮನಿಯ ಮ್ಯೂನಿಕ್‌ನಿಂದ ಗುರುವಾರ ಮಧ್ಯಾಹ್ನ ವಿಮಾನ ಹೊರಡಲಿದ್ದು, ಶುಕ್ರವಾರ ಮಧ್ಯರಾತ್ರಿ 12:30 ಕ್ಕೆ ಬೆಂಗಳೂರಿಗೆ ವಿಮಾನ ಆಗಮಿಸಲಿದೆ. ಪ್ರಜ್ವಲನನ್ನು ವಶಕ್ಕೆ ಪಡೆಯಲು ಎಸ್ಐಟಿ ಸಿದ್ದತೆ ನಡೆಸಿದೆ.
Poll (Public Option)

Post a comment
Log in to write reviews