
ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪೋಟೋ ವೈರಲ್ ಆದ ವಿಚಾರಕ್ಕೆ ಸಂಬಂಧ ಕಿಡಿಗೇಡಿಗಳ ವಿರುದ್ದ ನಟ ಪ್ರಜ್ವಲ್ ದೇವರಾಜ್ ಅಸಮಾಧಾನ ಹೊರಹಾಕಿದ್ದಾರೆ.
ನಟ ಪ್ರಜ್ವಲ್ ದೇವರಾಜ್ ಆರೋಗ್ಯ ಕುರಿತಾದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದರಿಂದಾಗಿ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ನಟ ಪ್ರಜ್ವಲ್ ದೇವರಾಜ್ ಆಪ್ತರು ಮಾಹಿತಿ ಹಂಚಿಕೊಂಡಿದ್ದು, ಪ್ರಜ್ವಲ್ ಅವರಿಗೆ ಯಾವುದೇ ರೀತಿಯ ಸಮಸ್ಯೆಯಿಲ್ಲ. ಕಿಡಿಗೇಡಿಗಳು ಸುಮ್ಮನೆ ಇಂತಹ ಫೋಟೊಗಳನ್ನು ಜಾಲತಾಣದಲ್ಲಿ ಹಾಕುತ್ತಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ರವಾನೆ ಮಾಡಿದ್ದಾರೆ.
ಈ ಕೃತ್ಯಕ್ಕೆ ಸಂಬಂಧಪಟ್ಟಂತೆ ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಸಲಹೆ ಪಡೆದು ದೂರು ನೀಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ. ಪ್ರಜ್ವಲ್ ಆರೋಗ್ಯವಾಗಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ಫೋಟೊ 'ವೀರಂ' ಸಿನಿಮಾದ್ದಾಗಿದ್ದು, ಇದೇ ಚಿತ್ರವನ್ನು ಇಟ್ಟುಕೊಂಡು ಕಿಡಿಗೇಡಿಗಳು ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ ಎಂದಿದ್ದಾರೆ.
Poll (Public Option)

Post a comment
Log in to write reviews