
ಮೈಸೂರು: ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣರನ್ನು ನೋಡಲು ತಂದೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಜೈಲಿಗೆ ಹೋಗುವುದಿಲ್ಲವೆಂದು ಅವರೇ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೋದಿಗೆ ಮಾತನಾಡಿದ ಅವರು, ನಮಗೆ ಸದ್ಯದ ಮಟ್ಟಿಗೆ ದೇವರೇ ಗತಿ. ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುವೆ ಎಂದರು. ನಮ್ಮ ಕುಟುಂಬದ ಮೇಲೆ ಹಾಕಿರುವ ಕೇಸ್‌ಗಳು ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಪ್ರಕರಣಗಳು ಕೋರ್ಟ್‌ನಲ್ಲಿ ಇರುವುದರಿಂದ ನಾನು ಮಾತಾಡಲ್ಲ. ನನಗೆ ದೇವರು, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನಮಗೆ ನ್ಯಾಯ ಸಿಗುವ ವಿಶ್ವಾಸ ಇದೆ ಎಂದರು.
ನಾನೀಗ ಪ್ರಜ್ವಲ್ ಭೇಟಿಯಾಗಲು ಹೋಗುವುದಿಲ್ಲ. ಒಂದು ವೇಳೆ ಹೋದರೆ, ಅವನು ಏನೋ ಹೇಳಿಕೊಡಲು ಹೋಗಿದ್ದಾನೆ ಎನ್ನುತ್ತಾರೆ ಎಂದು ಹೇಳಿದರು.
Poll (Public Option)

Post a comment
Log in to write reviews