2024-12-24 07:44:25

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರಜ್ವಲ್‌ ರೇವಣ್ಣ  ನಿರೀಕ್ಷಣಾ ಜಾಮೀನು  ಅರ್ಜಿ ವಿಚಾರಣೆ ಆಗಸ್ಟ್‌ 29 ಕ್ಕೆ ಮುಂದೂಡಿಕೆ

ಬೆಂಗಳೂರು : ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರವನ್ನು ಹೈಕೋರ್ಟ್ ಆ.29 ಕ್ಕೆ ಮುಂದೂಡಿದೆ.

 ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‍ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಆಕ್ಷೇಪಣೆ ಸಲ್ಲಿಸಲು ವಿಶೇಷ ಅಭಿಯೋಜಕರಿಗೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅವರು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಸಂದರ್ಭದಲ್ಲಿ ಸರ್ಕಾರಿ ಪರ ವಕೀಲರು ವಾದ ಮಂಡಿಸಿ ಮಹಿಳೆಗೆ ಕಿರುಕುಳವಾಗಿದೆ ಎಂದು ಆಕೆಯ ಹೇಳಿಕೆಯನ್ನು ಉಲ್ಲೇಖಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ವಿಚಾರಣೆಯನ್ನು ಆಗಸ್ಟ್  29 ಕ್ಕೆ ಮುಂದೂಡಿದೆ.

 

Post a comment

No Reviews