
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿರುವ ಪ್ರಜ್ವಲ್ ರೇವಣ್ಣಗೆ ಜೈಲಿನ ಅಧಿಕಾರಿಗಳು ವಿಚಾರಣಾಧೀನ ಕೈದಿ 5664 ನಂಬರ್ ನೀಡಿದ್ದಾರೆ.
ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಅವರಿಗೆ ಖೈದಿ ಸಂಖ್ಯೆ 5664 ನೀಡಲಾಗಿದೆ. ಮಹಿಳೆಯ ಅಪಹರಣ ಪ್ರಕರಣದಲ್ಲಿ ಪ್ರಜ್ವಲ್ ತಂದೆ, ಹೊಳೆನರಸೀಪುರ ಶಾಸಕ ಎಚ್ಡಿ ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು ಆದರೆ ಈ ವೇಳೆ ಎಚ್.ಡಿ.ರೇವಣ್ಣಗೆ ಜೈಲಿನಲ್ಲಿ ಕೆಲ ಸೌಲಭ್ಯಗಳನ್ನು ನೀಡಲಾಗಿತ್ತು ಆದರೆ ಪ್ರಜ್ವಲ್ ಗೆ ಯಾವುದೇ ಸೌಲಭ್ಯವನ್ನು ನೀಡುವ ಸಾಧ್ಯತೆಗಳಿಲ್ಲ ಎಂದು ತಿಳಿದುಬಂದಿದೆ.
ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ನಲ್ಲಿದ್ದಾರೆ. ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬರು, ಪಲ್ಯ ನೀಡಲಾಗಿದೆ. ಜೈಲಿನ ಕ್ವಾರೆಂಟೈನ್ ಬ್ಯಾರಕ್‌ನಲ್ಲಿ ಮೌನಕ್ಕೆ ಶರಣಾಗಿದ್ದಾರೆ.
Poll (Public Option)

Post a comment
Log in to write reviews