
ಬೆಂಗಳೂರು: ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ.
ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು. ಈ ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿರಿಸಿತ್ತು. ಆದರೆ ಇಂದು ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಪ್ರಜ್ವಲ್ ಜಾಮೀನು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದೆ. ಇನ್ನು ಜಾಮೀನಿಗಾಗಿ ಪ್ರಜ್ವಲ್ ಹೈಕೋರ್ಟ್ ಮೆಟ್ಟಿಲೇರಬೇಕಿದೆ.
Poll (Public Option)

Post a comment
Log in to write reviews