
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ನೇಮಿಸಿದ್ದ ಹೆಚ್ಚುವರಿ ಎಸ್‌ಪಿಪಿ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ.
ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಕ ಮಾಡಿತ್ತು. ಆದ್ರೆ ಈಗ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರ ವಾದಿಸಲು ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್‌ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ನೇಮಕ ಮಾಡಿತ್ತು. ಆದರೆ ಈಗ ಹೆಚ್ಚುವರಿ ಎಸ್‌ಪಿಪಿ ಆಗಿದ್ದ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ.
Poll (Public Option)

Post a comment
Log in to write reviews