ಟಾಪ್ 10 ನ್ಯೂಸ್
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಕೇಸ್: ಸುಳ್ಳು ದೂರು ನೀಡುವಂತೆ ಒತ್ತಡ, ಮೂವರ ವಿರುದ್ಧ ದೂರು

ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಯಾವುದೇ ಸಂತ್ರಸ್ತೆಯರಿಂದ ತಮಗೆ ದೂರು ಬಂದಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗ ಸ್ಪಷ್ಟಪಡಿಸಿದೆ. ಮಹಿಳೆಯೊಬ್ಬರಿಂದ ಈ ಪ್ರಕರಣದ ವಿಚಾರವಾಗಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಿ ಆಕೆ ಮೂವರು ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದಾರೆ.
ಸಿವಿಲ್ ಡ್ರೆಸ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ತಾವು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಪ್ರಜ್ವಲ್ ಪ್ರಕರಣದಲ್ಲಿ ಸುಳ್ಳು ದೂರು ನೀಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಅನಾಮದೇಯ ಕರೆಗಳ ಮೂಲಕವೂ ದೂರು ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
Poll (Public Option)

Post a comment
Log in to write reviews