ಪ್ರಜ್ವಲ್ ಎಸ್ಐಟಿ ಕಸ್ಟಡಿ ಇಂದು ಅಂತ್ಯ : ಮತ್ತೊಮ್ಮೆ ಕಸ್ಟಡಿಗೆ ಕೇಳಲಿರುವ ಎಸ್‌ಐಟಿ
ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಇಂದು ಮತ್ತೊಮ್ಮೆನ್ಯಾಯಾಯಲದ ಮುಂದೆ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲನನ್ನು ಹಾಜರುಪಡಿಸಲಿದ್ದಾರೆ.
ಪ್ರಕರಣ ಸಂಬಂಧ ವಿದೇಶದಿಂದ ಆಗಮಿಸಿದ್ದ ಪ್ರಜ್ವಲನನ್ನು ಮೇ 31 ರಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲೇ ಬಂಧಿಸಿ ಬಳಿಕ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ನ್ಯಾಯಾಲಯ ನೀಡಿತ್ತು. ಇಂದು ಕಸ್ಟಡಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೋರ್ಟ್ ಮುಂದೆ ಮತ್ತೆ ಪ್ರಜ್ವಲ್ ನನ್ನು ಹಾಜರುಪಡಿಸಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಮತ್ತಷ್ಟು ದಿನ ಕಸ್ಟಡಿಗೆ ನೀಡುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.
ಪುರುಷತ್ವ ಪರೀಕ್ಷೆ
ನ್ಯಾಯಾಲಯದ ಅನುಮತಿ ಪಡೆದಿದ್ದ ಎಸ್‌ಐಟಿ ಅಧಿಕಾರಿಗಳು ಬುಧವಾರ ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್‌ಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ವೀರ್ಯ ಮತ್ತು ರಕ್ತ ಮಾದರಿ ಸಂಗ್ರಹ ಮತ್ತು ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಈ ಪರೀಕ್ಷೆ ನಡೆಸಲಾಗಿದೆ. ಒಂದು ವಾರದಲ್ಲಿ ವರದಿ ಎಸ್‌ಐಟಿ ಕೈ ಸೇರಲಿದೆ ಎನ್ನಲಾಗಿದೆ.
ಮೂರು ದಿನಗಳ ಹಿಂದೆ ಪುರುಷತ್ವ ಪರೀಕ್ಷೆ ಸಲುವಾಗಿ ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಕರೆದುಕೊಂಡು ಹೋಗಲಾಗಿತ್ತು. ಆಗ ಕೆಲ ವೈದ್ಯಕೀಯ ಪರೀಕ್ಷೆಗಳಿಗೆ ಕಾನೂನು ತೊಡಕಿನ ಬಗ್ಗೆ ವೈದ್ಯರು ತಿಳಿಸಿದ್ದರು. ಇದರಿಂದ ನ್ಯಾಯಾಲಯದ ಅನುಮತಿ ಪಡೆದು ಎಸ್‌ಐಟಿ ಬುಧವಾರ ಅವರನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ದಿತ್ತು. ನ್ಯಾಯಾಲಯದ ಸಮ್ಮತಿ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತಜ್ಞ ವೈದ್ಯರ ತಂಡವನ್ನು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರು ರಚಿಸಿದ್ದರು.
Post a comment
Log in to write reviews