2024-09-19 04:58:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೂರನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ ಪ್ರಥಮ್ ಸಿಂಗ್

ಆಂಧ್ರಪ್ರದೇಶದ ಅನಂತಪುರದಲ್ಲಿರುವ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಯುವ ದಾಂಡಿಗ ಪ್ರಥಮ್ ಸಿಂಗ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ಎ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 290 ರನ್ ಗಳಿಸಿ ಆಲೌಟ್ ಆಯಿತು.

ಇದಕ್ಕೆ ಉತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಭಾರತ ಡಿ ತಂಡದ ಪರ ದೇವದತ್ ಪಡಿಕ್ಕಲ್ (92) ಅರ್ಧಶತಕ ಬಾರಿಸಿ ಮಿಂಚಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 183 ರನ್​ಗಳಿಸಿ ಭಾರತ ಡಿ ತಂಡವು ಮೊದಲ ಇನಿಂಗ್ಸ್ ಅಂತ್ಯಗೊಳಿಸಿತು.
ಇದರ ಬೆನ್ನಲ್ಲೇ ದ್ವಿತೀಯ ಇನಿಂಗ್ಸ್ ಆರಂಭಿಸಿದ ಭಾರತ ಎ ತಂಡಕ್ಕೆ ಪ್ರಥಮ್ ಸಿಂಗ್ ಹಾಗೂ ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದರು.

ಮೊದಲ ವಿಕೆಟ್​ಗೆ 115 ರನ್​ಗಳ ಜೊತೆಯಾಟವಾಡಿದ ಬಳಿಕ ಮಯಾಂಕ್ ಅಗರ್ವಾಲ್ (56) ವಿಕೆಟ್ ಒಪ್ಪಿಸಿದರು. ಇದಾಗ್ಯೂ ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ಪ್ರಥಮ್ ಸಿಂಗ್ 149 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 189 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 122 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ವಿಶೇಷ ಎಂದರೆ ಇದು ಪ್ರಥಮ್ ಸಿಂಗ್ ಅವರ ಮೊದಲ ದುಲೀಪ್ ಟ್ರೋಫಿ ಶತಕವಾಗಿದೆ.

ಭಾರತ A (ಪ್ಲೇಯಿಂಗ್ XI): ಪ್ರಥಮ್ ಸಿಂಗ್, ಮಯಾಂಕ್ ಅಗರ್ವಾಲ್ (ನಾಯಕ), ತಿಲಕ್ ವರ್ಮಾ, ರಿಯಾನ್ ಪರಾಗ್, ಶಾಶ್ವತ್ ರಾವತ್, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಆಕಿಬ್ ಖಾನ್.

ಭಾರತ D (ಪ್ಲೇಯಿಂಗ್ XI): ಅಥರ್ವ ತೈಡೆ, ಯಶ್ ದುಬೆ, ಶ್ರೇಯಸ್ ಅಯ್ಯರ್ (ನಾಯಕ), ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಸೌರಭ್ ಕುಮಾರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವಿಧ್ವತ್ ಕಾವೇರಪ್ಪ, ಆದಿತ್ಯ ಠಾಕರೆ.

Post a comment

No Reviews