
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಆರಂಭಿಸಲು ಸಿದ್ಧತೆ ನಡೆದಿದ್ದು, ಇದನ್ನು ಕಾರ್ಯಗತಗೊಳಿಸುವಂತೆ ಶಾಲಾ ಶಿಕ್ಷಕರಿಗೆ ನಿರ್ದೇಶನ ನೀಡಲಾಗಿದೆ.
2024- 25ರ ಶೈಕ್ಷಣಿಕ ವರ್ಷದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಪರಿಚಯಿಸಲಿದೆ. "How to make English easy” ಎಂಬ ಪರಿಕಲ್ಪನೆಯೊಂದಿಗೆ 40 ನಿಮಿಷಗಳ ಸ್ಪೋಕನ್ ಇಂಗ್ಲೀಷ್ ತರಗತಿ ಪ್ರತಿ ಶನಿವಾರ ನಡೆಸಲು ಸಿದ್ಧತೆ ನಡೆಸಲಾಗಿದೆ. ಈ ಮೂಲಕ ಸರ್ಕಾರಿ ಶಾಲೆ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಕಬ್ಬಿಣದ ಕಡಲೆ ಆಗಿರುವ ಇಂಗ್ಲೀಷ್ ಭಾಷೆ ಕರಗತಗೊಳಿಸಲು ಇದು ಸಹಕಾರಿ ಆಗಲಿದೆ. ಈ ಮೂಲಕ ವಿದ್ಯಾರ್ಥಿಗಳು, ಸಹಜವಾಗಿ ಇಂಗ್ಲೀಷ್ ಕಲಿಯಲು ಪೂರಕ ವಾತಾವರಣ ಸೃಷ್ಟಿಸಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸೂಚನೆ ನೀಡಲಾಗಿದೆ.
Poll (Public Option)

Post a comment
Log in to write reviews